ವಿಟ್ಲ : ತಾಲೂಕಿನ ವಿಟ್ಲ ವಲಯದ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲಾರದ ಪ್ರೊ. ಪದ್ಮನಾಭ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ರೇಣುಕಾ ಕಣಿಯೂರ್ ಮಾತನಾಡಿ ಕಾಲೇಜು ವಿದ್ಯಾರ್ಥಿಗಳು ದುಶ್ಚಟ ಬಲಿಯಾಗುವ ವಿವಿಧ ಬಗ್ಗೆ, ಆದ್ದರಿಂದ ದೂರವಿರುವ ಬಗ್ಗೆ, ದುಶ್ಚಟದಿಂದ ಆಗುವ ಕುಟುಂಬ ಮತ್ತು ಸಮಾಜಕ್ಕೆ ಆಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಮತಿ ಶಶಿಕಲಾ, ಶ್ರೀಮತಿ ಸುಜಾತ, ವಲಯದ ಮೇಲ್ವಿಚಾರಕರಾದ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಶ್ರೀಮತಿ ಆಶಾ, ಕು. ಚೇತನ ಕಾರ್ಯಕ್ರಮಕ್ಕೆ ಸಹಕರಿಸಿದರು.



