Sun. Sep 7th, 2025

ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಶಿಕ್ಷಕರ ದಿನಾಚರಣೆಯನ್ನು ಡಾ! ಸರ್ವಪಳ್ಳಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಗೌರವಯುತವಾಗಿ ಆಚರಿಸಲಾಯಿತು.

ಇದನ್ನೂ ಓದಿ: 💐💐ಬೆಳ್ತಂಗಡಿ: ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತಾ ಮಾತನಾಡಿದ ಇವರು ” ಶಿಕ್ಷಕರಿಗೆ ಅವರ ದೊಡ್ಡ ಸಂಪಾದನೆ ಅದು ಮಕ್ಕಳ ಪ್ರೀತಿ. ಶಿಕ್ಷಕರಾಗಿ ನಾವು ನಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡೋಣ ” ಎಂದರು.

ಆಡಳಿತ ಟ್ರಸ್ಟ್ ನ ಸಂಚಾಲಕರು ಹಾಗೂ ಸರ್ವ ಸದಸ್ಯರುಗಳು ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ವಿದ್ಯಾರ್ಥಿಗಳು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಶುಭಾಶಯಗಳನ್ನು ಕೋರುತ್ತ ಸಂಭ್ರಮಿಸಿದರು.

Leave a Reply

Your email address will not be published. Required fields are marked *