ಪಾರೆಂಕಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷದ ಸಂಘಟನಾ ದೃಷ್ಟಿಯಿಂದ ಸೆ 07 ರಂದು ಪಾರೆಂಕಿ ಕುಕ್ಕಳ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ ಬಸವನಗುಡಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಇದನ್ನೂ ಓದಿ: 🔴ಬೆಳ್ತಂಗಡಿ :ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ
ಪಕ್ಷದ ಹಿರಿಯ ಕಾರ್ಯಕರ್ತರಾದ ಪರಮೇಶ್ವರ ಗೌಡ ಹಟ್ಟತ್ತೋಡಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು. ಪಾರೆಂಕಿ ಶಕ್ತಿಕೇಂದ್ರದ ಅಧ್ಯಕ್ಷರಾದ ಕಾಂತಪ್ಪ ಗೌಡ ಸ್ವಾಗತಿಸಿ, ಶಾಸಕ ಹರೀಶ್ ಪೂಂಜರವರು ಉದ್ಘಾಟನಾ ಭಾಷಣ ಮಾಡಿದರು. ಉಮೇಶ್ ನಡ್ತಿಕಲ್ಲು, ಸದಾನಂದ ಉಂಗಿಲಬೈಲು, ಸೀತಾರಾಮ್ ಬೆಳಾಲು ಬೈಠಕ್ ತೆಗೆದುಕೊಂಡರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಸಮಾರೋಪ ಭಾಷಣ ಮಾಡಿದರು. ನಂದಕುಮಾರ್ ನಿರ್ವಹಿಸಿದರು.



ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್,ಜಿಲ್ಲಾ ಕಾರ್ಯದರ್ಶಿ ವಸಂತಿ ಲಕ್ಷ್ಮಣ್,ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಚಂದ್ರಕಾಂತ್ ಗೌಡ ನಿಡ್ಡಾಜೆ, ಪಕ್ಷದ ಹಿರಿಯರಾದ ಪದ್ಮನಾಭ ಅರ್ಕಜೆ, ಮಡಂತ್ಯಾರು ಪಂಚಾಯತ್ ಅಧ್ಯಕ್ಷರಾದ ರೂಪ ನವೀನ್ ಕೋಡ್ಲಕ್ಕೆ, ಕುಕ್ಕಳ ಶಕ್ತಿಕೇಂದ್ರ ಅಧ್ಯಕ್ಷರಾದ ಶೈಲೇಶ್ ಪುಲಿಮಜಲು, ಪಂಚಾಯತ್ ಸದಸ್ಯರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
