ಬೆಳ್ತಂಗಡಿ: ಧರ್ಮಸ್ಥಳದ ಷಡ್ಯಂತರದ ಬಗ್ಗೆ ಸೆಪ್ಟೆಂಬರ್ 08 ರಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಸೂಕ್ತವಾದ ಕಾನೂನು ಕ್ರಮ ಕೈಗೊಂಡು ಧರ್ಮಸ್ಥಳ ಕ್ಷೇತ್ರದ ಮೇಲೆ ಆಗುತ್ತಿರುವ ಷಡ್ಯಂತ್ರದ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಬೇಕಾಗಿ ವಿನಂತಿಸಿದರು.

ಇದನ್ನೂ ಓದಿ: ⭕ಬೆಳ್ತಂಗಡಿ: ಅಕ್ರಮ ಕಸಾಯಿಖಾನೆ ಹಾಗೂ ಗೋಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಬೇಕು
ಈ ಸಂದರ್ಭದಲ್ಲಿ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ವಿಧಾನಪರಿಷತ್ ಪ್ರತಿಪಕ್ಷದ ನಾಯಕರದ ಛಲವಾದಿ.ಟಿ. ನಾರಾಯಣಸ್ವಾಮಿ, ವಿಧಾನಸಭಾ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಸಂಸದರು ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ,ಯಲಹಂಕ ಶಾಸಕರಾದ ಎಸ್.ಆರ್. ವಿಶ್ವನಾಥ್ ಮತ್ತು ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.



