ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನ ಹತ್ತಿರ ಈದ್ ಮಿಲಾದ್ ಹಬ್ಬದ ಹಿಂದಿನ ದಿನ ಅಕ್ರಮ ಕಸಾಯಿ ಖಾನೆಯಲ್ಲಿ 9 ದನಗಳನ್ನು ಹಿಂಸಾತ್ಮಕವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು. ಈ ಅಮಾನುಷ ಘಟನೆಯನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ.

ಇದನ್ನೂ ಓದಿ: 🔴ಉಜಿರೆ : ಉಜಿರೆ ಅನುಗ್ರಹ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಉಪನ್ಯಾಸ ಕಾರ್ಯಕ್ರಮ
ಇದರ ಜೊತೆ ಸ್ಥಳದಲ್ಲಿ ಒಂದು ಜೀವಂತ ದನ ಹಾಗೂ ಕರುವು ಸಿಕ್ಕಿದ್ದು ಅದರ ರಕ್ಷಣೆ ಆಗಿದೆ.ಹಿಂದೂ ಸಮಾಜದ ಮೂಲ ನಂಬಿಕೆಗಳಲ್ಲಿ ಒಂದಾದ ಗೋವನ್ನು ಹಿಂದೂ ಸಮಾಜದ ನಂಬಿಕೆಗಳಿಗೆ ಅಪಚಾರ ಮಾಡಬೇಕು ಹಾಗೂ ಸಮಾಜದಲ್ಲಿ ಅಶಾಂತಿ ಸೃಷ್ಟಿಸಬೇಕೆಂಬ ಉದ್ದೇಶದಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ

ಸಹ ಈ ರೀತಿಯಾಗಿ ಕಾನೂನಿನ ಭಯ ಇಲ್ಲದೇ ರಾಜರೋಷವಾಗಿ ಅಕ್ರಮ ಕಸಾಯಿಖಾನೆಗಳಲ್ಲಿ ಹತ್ಯೆ ಮಾಡುವ ಕಾರ್ಯಗಳು ನಡೆಯುತ್ತಿದ್ದು ಪೋಲಿಸ್ ಇಲಾಖೆ ಇದರ ಬಗ್ಗೆ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗೋವುಗಳ ವಧೆ ನಡೆದ ಜಾಗವನ್ನು ಸೀಜ್ ಮಾಡಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪೋಲಿಸ್ ಇಲಾಖೆಗೆ ಆಗ್ರಹಿಸುತ್ತದೆ ಹಾಗೂ ಇನ್ನೂ ಹಲವು ಕಡೆ ಅಕ್ರಮ ಗೋಸಾಗಾಟ ಮತ್ತು ಕಸಾಯಿಖಾನೆ ನಡೆಯುತ್ತಿದ್ದು ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಇನ್ನೂ ಮುಂದೆ ಸಮಾಜದಲ್ಲಿ ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.


