Fri. Sep 12th, 2025

ಉಪ್ಪಿನಂಗಡಿ: ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ – ಫೋಟೋಗ್ರಾಫರ್‌ ಅರೆಸ್ಟ್

ಉಪ್ಪಿನಂಗಡಿ: ಯುವತಿಯನ್ನು ಮದುವೆಯಾಗುತ್ತೇನೆಂದು ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಫೋಟೋಗ್ರಾಫರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ⭕ಬೆಂಗಳೂರು: ಧರ್ಮಸ್ಥಳ ಎಸ್.ಐ.ಟಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುರೇಶ್‌ ಕುಮಾರ್‌

ಸಂಕೇತ್ ಗಾಣಿಗ (31) ಬಂಧಿತ.ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಮೂಡಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಪ್ರಕರಣದ ಆರೋಪಿ ಉಡುಪಿ ಮೂಲದ ಯುವತಿಯೊಬ್ಬಳೊಂದಿಗೆ ಇನ್ಸ್ಟಾಗ್ರಾಂನಲ್ಲಿ ಸಲುಗೆ ಬೆಳೆಸಿ, ಬಳಿಕ ದೈಹಿಕವಾಗಿ ಆಕೆಯನ್ನು ಬಳಸಿಕೊಂಡಿದ್ದಾನೆ. ಆದರೆ ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ.


ಯುವತಿ ಮೂಡಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *