Sat. Sep 13th, 2025

ಧರ್ಮಸ್ಥಳ: ಸೆ.14 ರಿಂದ 21 ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

ಧರ್ಮಸ್ಥಳ: ಸೆ.14 ರಿಂದ 21 ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ ನಡೆಯಲಿದೆ.

ಖ್ಯಾತ ಗಾಯಕರಾದ ಶಂಕರ್‌ಶಾನ್‌ಭಾಗ್, ಅರ್ಚನಾ ಉಡುಪ, ರಾಮಕೃಷ್ಣ ಕಾಟುಕುಕ್ಕೆ, ಉಷಾ ಹೆಬ್ಬಾರ್ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಕಮ್ಮಟದಲ್ಲಿ ಮಾಹಿತಿ, ಮಾರ್ಗದರ್ಶನ ನೀಡಲಿದ್ದಾರೆ.


ಪ್ರತಿ ದಿನ ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಧಾರ್ಮಿಕ ಉಪನ್ಯಾಸ, ಸಂಜೆ ಗಂಟೆ 5.30 ರಿಂದ ನಗರಭಜನೆ ನಡೆಯಲಿದೆ.
ಸೆ. 21 ರಂದು ಭಾನುವಾರ ಸಮಾರೋಪ ಸಮಾರಂಭ ನಡೆಯಲಿದ್ದು , 400 ಭಜನಾ ತಂಡಗಳ ಆರು ಸಾವಿರ ಭಜನಾ ಪಟುಗಳಿಂದ ಶೋಭಾಯಾತ್ರೆ ಹಾಗೂ ಅಮೃತವರ್ಷಿಣಿ ಸಭಾಭವನದಲ್ಲಿ ನೃತ್ಯಭಜನೆ ನಡೆಯಲಿದೆ.


ಸೆ. 14 ರಂದು ಉದ್ಘಾಟನಾ ಸಮಾರಂಭವು ಮಹೋತ್ಸವ ಸಭಾ ಭವನದಲ್ಲಿ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾ ಡಾ. ಎಂ. ಮೋಹನ ಆಳ್ವ ಭಜನಾ ಕಮ್ಮಟವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.
ಶ್ರೀ ಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *