Wed. Sep 17th, 2025

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಲವಾರು & ಬಂದೂಕು ಪತ್ತೆ – ಎಸ್.ಐ.ಟಿ ಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ವಾರಂಟ್ ಪಡೆದು ಉಜಿರೆ ಮಹೇಶ್ ಶೆಟ್ಟಿ ಮನೆಯಲ್ಲಿ ಆಗಸ್ಟ್ 26 ರಂದು ಶೋಧ ಕಾರ್ಯ ನಡೆಸಿದಾಗ ಒಟ್ಟು 44 ವಸ್ತುಗಳನ್ನು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಎರಡು ಮರದ ಹಿಂದೆ ಇರುವ ತಲವಾರು ಮತ್ತು ಒಂದು ಬಂದೂಕು ಪತ್ತೆಯಾಗಿತ್ತು. ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು.

ಈ ಸಂಬಂಧ ಎಸ್.ಐ.ಟಿ ಎಸ್ಪಿ ಸಿ.ಎ.ಸೈಮನ್ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಮುಂದಿನ ತನಿಖೆ ನಡೆಸಲು ಉಜಿರೆ ಮಹೇಶ್ ಶೆಟ್ಟಿ ವಿರುದ್ಧ ದೂರು ನೀಡಿದ್ದರು.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಎಸ್.ಐ.ಟಿ, ಎಸ್ಪಿ.ಸಿ.ಎ.ಸೈಮನ್ ನೀಡಿದ ದೂರಿನ ಮೇರೆಗೆ ARMS ACT 1959(U/S-25(1),25(1-A),24(1-B)(a)) ಅಡಿಯಲ್ಲಿ ಉಜಿರೆ ಮಹೇಶ್ ಶೆಟ್ಟಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.16 ರಂದು ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *