Fri. Sep 19th, 2025

ಧರ್ಮಸ್ಥಳ: (ಸೆ. 21) ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಧರ್ಮಸ್ಥಳ: ಎಸ್.ಡಿ.ಎಂ. ಹಿರಿಯ ವಿದ್ಯಾರ್ಥಿಗಳ ಬೃಹತ್ ಸಮಾವೇಶವು ಸೆಪ್ಟೆಂಬರ್ 21 ರಂದು ಅಮೃತವರ್ಷಿಣಿ ಸಭಾಭವನ, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

ಇದನ್ನೂ ಓದಿ: ಬೆಳಾಲು: ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಳೆದ 7-8 ದಶಕಗಳಿಂದ ಪ್ರೈಮರಿ, ಹೈಸ್ಕೂಲ್, ಪದವಿ ಕಾಲೇಜು, ಐಟಿಐ, ಪಾಲಿಟೆಕ್ನಿಕ್, ಕಾನೂನು ಪದವಿ, ನರ್ಸಿಂಗ್, ಇಂಜಿನಿಯರಿಂಗ್, ಆಯುರ್ವೇದ, ನ್ಯಾಚುರೋಪತಿ, ಯೋಗ, ಹೋಮಿಯೋಪತಿ, ವೈದ್ಯಕೀಯ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದು, ಈ ಎಲ್ಲಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿರುವ ಸಾವಿರಾರು ವಿದ್ಯಾರ್ಥಿಗಳು ಸೆ.21ರ ಸಮ್ಮಿಲನದಲ್ಲಿ ಭಾಗಿಯಾಗಲಿದ್ದಾರೆ.

Leave a Reply

Your email address will not be published. Required fields are marked *