Fri. Sep 19th, 2025

ಬೆಳ್ತಂಗಡಿ : ಮಹೇಶ್‌ ಶೆಟ್ಟಿ ತಿಮರೋಡಿ ಮನೆಯ ಗೋಡೆಗೆ ನೋಟಿಸ್‌ ಅಂಟಿಸಿದ ಬೆಳ್ತಂಗಡಿ ಪೋಲಿಸರು

ಬೆಳ್ತಂಗಡಿ: ಎಸ್.ಐ.ಟಿ ಶೋಧದ ವೇಳೆ ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದು,

ಇದನ್ನೂ ಓದಿ: ⭕ಬೆಂಗಳೂರು: ಧರ್ಮಸ್ಥಳ ಸಮಾಧಿ ಶೋಧ ಪ್ರಕರಣ

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಸೆ.18 ರಂದು ಉಜಿರೆ ತಿಮರೋಡಿ ಮನೆಗೆ ಮಹಜರು ನಡೆಸಲು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಉಜಿರೆಯ ತಿಮರೋಡಿ ಮನೆಗೆ ಸೆ.19 ರಂದು ಬೆಳಗ್ಗೆ 6 ಗಂಟೆಗೆ ಬೆಳ್ತಂಗಡಿ ಪೊಲೀಸರು ಹೋದಾಗ ಕೂಡ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇಲ್ಲವಾದ ಕಾರಣ ವಿಚಾರಣೆಗೆ ಸೆ.21 ರಂದು ಹಾಜರಾಗಲು ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಅನ್ನು ಬೆಳ್ತಂಗಡಿ ಪೊಲೀಸರು ಅಂಟಿಸಿ ಬಂದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *