Sat. Sep 20th, 2025

ಜಾತಿ ಗಣತಿ ಖಚಿತ: ಸೆಪ್ಟೆಂಬರ್ 22ರಿಂದ ಸಮೀಕ್ಷೆ ಆರಂಭ

(ಸೆ.20) ಬೆಂಗಳೂರು — ರಾಜ್ಯದಲ್ಲಿ ಜಾತಿ ಗಣತಿ (Caste Census) ನಡೆಯುವುದು ಈಗ ಖಚಿತವಾಗಿದೆ. ಕರ್ನಾಟಕ ಸರ್ಕಾರವು ಅಧಿಕೃತ ಆದೇಶವನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಈ ಸಮೀಕ್ಷೆ ನಡೆಸಲಿದ್ದು, ಜನರು ಸಮೀಕ್ಷೆಗೆ ಸಹಕರಿಸುವಂತೆ ಕೋರಿದೆ. ಸರ್ಕಾರದೊಳಗೆ ಗಣತಿಯ ಬಗ್ಗೆ ಗೊಂದಲಗಳು ಇದ್ದ ಕಾರಣ ಇದು ನಡೆಯುತ್ತದೆಯೇ ಇಲ್ಲವೇ ಎಂಬ ಪ್ರಶ್ನೆಗಳು ಎದ್ದಿದ್ದವು. ಆದರೆ, ಸರ್ಕಾರದ ಅಧಿಕೃತ ಆದೇಶವು ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದೆ.

ಸಮೀಕ್ಷೆಗಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮೀಕ್ಷಕರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಹಾಗೂ ಸಮೀಕ್ಷೆಯಲ್ಲಿ ಸಂಪೂರ್ಣವಾಗಿ ಭಾಗವಹಿಸಲು ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.

ಇದೀಗ, ಈ ಸಮೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸುವ ಬಗ್ಗೆ ಆದೇಶದಲ್ಲಿ ಯಾವುದೇ ಸ್ಪಷ್ಟತೆ ಇಲ್ಲದಿರುವುದು ಚರ್ಚೆಗೆ ಕಾರಣವಾಗಿದೆ. ಆದರೆ, ಸಮೀಕ್ಷೆ ಆರಂಭಕ್ಕೆ ಸರ್ಕಾರವು ಗ್ರೀನ್ ಸಿಗ್ನಲ್ ನೀಡಿದೆ.

ಇದನ್ನು ಓದಿ : ಇಂಫಾಲ್ ಸಮೀಪ ಅಸ್ಸಾಂ ರೈಫಲ್ಸ್ ಯೋಧರ ಮೇಲೆ ದಾಳಿ; ಇಬ್ಬರು ಹುತಾತ್ಮ, ಐವರಿಗೆ ಗಾಯ

Leave a Reply

Your email address will not be published. Required fields are marked *