ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಫುಟ್ಬಾಲ್ ಪಂದ್ಯಾಟ ನಿಡ್ಲೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಈ ಫುಟ್ಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 14 ವರ್ಷದ ಒಳಗಿನ ಬಾಲಕರ ಫುಟ್ಬಾಲ್ ಪಂದ್ಯಾಟದಲ್ಲಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡು 11 ಆಟಗಾರರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
17 ವರ್ಷದ ಒಳಗಿನ ಬಾಲಕರ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನದೊಂದಿಗೆ 7 ಆಟಗಾರರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರೌಢಶಾಲಾ ವಿಭಾಗದಲ್ಲಿ ಉತ್ತಮ ಆಟಗಾರನಾಗಿ ಅಹಮದ್ ಪರಾಜ್, ಪ್ರಾರ್ಥಮಿಕ ವಿಭಾಗದಲ್ಲಿ ಉತ್ತಮ ಡಿಪೆಂಡರ್ ರೂಹೈಲ್ ರಿಯಾಜ್ ಇಬ್ರಾಹಿಂ, ಉತ್ತಮ ಆಟಗಾರನಾಗಿ ಮುನೀಬ್ ಆಯ್ಕೆಯಾಗಿರುತ್ತಾರೆ.



