ಬಂಟ್ವಾಳ: ನೀರು ತುಂಬಿದ್ದ ಹೊಂಡಕ್ಕೆ ಕಾಲುಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಸಜೀಪಮೂಡ ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಅಬ್ದುಲ್ ಅಮೀರ್ (23) ಮೃತ ದುರ್ದೈವಿ.

ಇದನ್ನೂ ಓದಿ: 🔴ಬೆಳ್ತಂಗಡಿ: ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ
ಅಮೀರ್ ಕೂಲಿ ಕೆಲಸ ಮಾಡಿಕೊಂಡಿದ್ದು, ಸೆಪ್ಟೆಂಬರ್ 20ರಂದು ಸಂಜೆ ಗೆಳೆಯರ ಜೊತೆ ಕೆಲಸಕ್ಕೆ ಹೋಗಿದ್ದು, ಸಂಜೆ ಕೆಲಸ ಮುಗಿಸಿ ಅಲ್ಲೇ ಸಮೀಪದಲ್ಲಿದ್ದ ನೀರು ತುಂಬಿದ್ದ ಹೊಂಡಕ್ಕೆ ಕೈಕಾಲು ಮುಖ ತೊಳೆಯಲು ಹೋದ ವೇಳೆ ಘಟನೆ ನಡೆದಿದೆ.
ನೀರಿಗೆ ಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅಮೀರ್ ನನ್ನು ಕೂಡಲೇ ದೇರಳಕಟ್ಟೆಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



