Mon. Sep 22nd, 2025

ಬೆಳಾಲು: ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: (ಸೆ.22) ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 26 ರಂದು ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: ⭕ಕರಾವಳಿ ಭಾಗದ ಪ್ರವಾಸಿಗರಿಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ದೇವರ ದರ್ಶನ ವ್ಯವಸ್ಥೆ

ಈ ಸಂದರ್ಭದಲ್ಲಿ ಅನಂತೇಶ್ವರ ಫ್ರೆಂಡ್ಸ್ ಇದರ ಅಧ್ಯಕ್ಷರಾದ ಸಂತೋಷ್ ನಾಯ್ಕ ಕುದ್ದಂಟೆ, ಗೌರವಾಧ್ಯಕ್ಷರಾದ ಶ್ರೀ ವಿಶ್ವನಾಥ ಪೂಜಾರಿ ಬಾಯ್ತರಡ್ಡ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಗೌಡ ಮತ್ತು ಅನಂತೇಶ್ವರ ಫ್ರೆಂಡ್ಸ್ ಇದರ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *