Mon. Sep 22nd, 2025

ಉಜಿರೆ: ಸೆ.23 ರಂದು ಉಜಿರೆಯ ಅತ್ತಾಜೆಯಲ್ಲಿ ಸ್ವಚ್ಛೋತ್ಸವ ಬೃಹತ್‌ ಸ್ವಚ್ಛತಾ ಅಭಿಯಾನ

ಉಜಿರೆ: ಸ್ವಚ್ಛ ಭಾರತ ಅಭಿಯಾನವು ಭಾರತ ಸರ್ಕಾರದ ಅತ್ಯಂತ ಮಹತ್ವದ ಸ್ವಚ್ಛತಾ ಅಭಿಯಾನವಾಗಿದೆ. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್. 2 ರ ಗಾಂಧಿ ಜಯಂತಿ­ಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛ­ಗೊಳಿಸಿ,

ಇದನ್ನೂ ಓದಿ: 🔴ಬೆಳ್ತಂಗಡಿ : ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ

ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ­ ನೀಡುವ ಮೂಲಕ ದೇಶದ ಜನ­ರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವ­­ಜನಿಕ ಪ್ರದೇಶಗಳಲ್ಲಿ ಕೊಳೆ, ಕಸ­ಗಳನ್ನು ನೋಡಿ ತಾವೇನೂ ಮಾಡ­ಲಾ­ಗದೇ, ಅವು­ಗಳಿಗೆ ಅನಿವಾರ್ಯವಾಗಿ ಹೊಂದಿ­ಕೊಂಡಂತಿದ್ದ ಬಹ­ಳಷ್ಟು ಜನರಲ್ಲಿ ಆಶಾ­ಭಾವನೆಗಳು ಚಿಗುರೊಡೆದಿವೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ ) ತಾಲೂಕು ಪಂಚಾಯತ್, ಬೆಳ್ತಂಗಡಿ ಉಜಿರೆ ಗ್ರಾಮ ಪಂಚಾಯತ್ ಸ್ವಚ್ಛೋತ್ಸವ ಬೃಹತ್‌ ಸ್ವಚ್ಛತಾ ಅಭಿಯಾನವು ಅತ್ತಾಜೆಯ ಅಮೃತ ಸರೋವರದ ಬಳಿ ಸೆಪ್ಟೆಂಬರ್‌ . 23 ರಂದು ಮಧ್ಯಾಹ್ನ 2:00ಗಂಟೆಗೆ ನಡೆಯಲಿದೆ.

Leave a Reply

Your email address will not be published. Required fields are marked *