Tue. Oct 14th, 2025

ಬೆಳ್ತಂಗಡಿ : ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಬೆಳ್ತಂಗಡಿ : ಸಿಯೋನ್ ಆಶ್ರಮ ಗಂಡಿಬಾಗಿಲು ಬೆಳ್ತಂಗಡಿ ತಾಲೂಕು ಇಲ್ಲಿ ಇಂಟರ್ ನ್ಯಾಷನಲ್ ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಹಾಗೂ ಎ.ಜೆ.ಆಸ್ಪತ್ರೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: 🔴ಕೊರಿಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜದಲ್ಲಿ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ


ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಸಿಯೋನ್ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟೀಯವರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿಕೊಂಡು, “ಇಂತಹ ಆರೋಗ್ಯ ಶಿಬಿರಗಳು ಗ್ರಾಮೀಣ ಪ್ರದೇಶದಲ್ಲಿರುವ ನಮ್ಮಆಶ್ರಮನಿವಾಸಿಗಳಿಗೆ ತುಂಬಾ ಉಪಯುಕ್ತವಾಗುತ್ತವೆ.” ಎಂದು ಶುಭ ಹಾರೈಸಿದರು.

ಲಯನ್ಸ್ ಕ್ಲಬ್ ಪುತ್ತೂರು ಕ್ರೌನ್ ಇದರ ಅಧ್ಯಕ್ಷರಾದ ಶ್ರೀಯುತ ಆಂಟನಿ ಒಲಿವೆರಾರವರು “ಸೇವೆಯೇ ನಮ್ಮ ಧ್ಯೇಯ. ಇಂತಹ ಶಿಬಿರಗಳು ಜನರ ಜೀವನಕ್ಕೆ ಆಶಾಕಿರಣ ತರುತ್ತವೆ. ಆರೋಗ್ಯ ಶಿಬಿರ ಯಶಸ್ವಿಯಾಗಿ ನಡೆಯಲಿ ಎಲ್ಲರೂ ಆರೋಗ್ಯವಾಗಿರಲಿ” ಎಂದು ಹೇಳಿದರು. ಎ.ಜೆ.ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಮಂಗಳೂರು ಇಲ್ಲಿನ ವೈದ್ಯಕೀಯ ಅಧಿಕಾರಿ ಡಾ.ಮೆಘನ್ ಹಾಗೂ ಎ.ಜೆ.ಅಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.

294 ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು. ಈ ಸಂಧರ್ಭದಲ್ಲಿ ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ., ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಶೋಭಾ ಯು.ಪಿ., ಲಯನ್ಸ್ ಕ್ಲಬ್ ಮಾರ್ಗದರ್ಶಕರಾದ ಶ್ರೀಯುತ ಲ್ಯಾನ್ಸಿ ಮಸ್ಕರೇನಸ್, ಸಂಸ್ಥೆಯ ವೈದ್ಯಾಧಿಕಾರಿ ಡಾ.ಶಿವಾನಂದಸ್ವಾಮಿ, ಸಂಸ್ಥೆಯ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಆಶಾ ಸುಧಾಕರ್ ರವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *