Fri. Nov 28th, 2025

ಮುಂಡಾಜೆ: ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ,ಇಲ್ಲಿನ 2025-26 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಬಾಗಿಲು ,ಇಲ್ಲಿ ಆರೋಗ್ಯ ಕ್ಲಿನಿಕ್ ನಾವೂರು ಇಲ್ಲಿನ ವೈದ್ಯರಾದ ಡಾll ಪ್ರದೀಪ್ ಎ ಉದ್ಘಾಟಿಸಿದರು.

ಇದನ್ನೂ ಓದಿ: 🔴ಬೆಳ್ತಂಗಡಿ : ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

ಈ ಸಂದರ್ಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು” ಎನ್ ಎಸ್ ಎಸ್ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಮರೆಯಲಾರದ ಸವಿನೆನಪು: ಜೀವನ ಕೌಶಲ್ಯವನ್ನು ಮೈಗೂಡಿಸಿಕೊಳ್ಳುವುದರ ಮೂಲಕ ಇದನ್ನು ಸಾರ್ಥಕಪಡಿಸಿಕೊಳ್ಳಿ” ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ಇವರು ವಹಿಸಿದ್ದರು.

ಗ್ರಾಮ ಪಂಚಾಯತ್ ಮಿತ್ತಬಾಗಿಲು ಇದರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಕೆ , ಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಕುಮಾರಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್ ಕೆ, ಶುಭ ಹಾರೈಸಿದರು.

ಮಿತ್ತಬಾಗಿಲು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಕೊಲ್ಲಿ, ಕಾಲೇಜಿನ ಪ್ರಾಂಶುಪಾಲೆ ಗೀತಾ, ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಹೈದರಾಲಿ , ಕಾರ್ಯದರ್ಶಿ ಅಬ್ದುಲ್ ಅಜೀಜ್, ಎಸ್ ಡಿ ಎಂ ಸಿ ಅಧ್ಯಕ್ಷ ಕಬೀರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿಕೆ ವಂದಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *