ಉಜಿರೆ: ಬಿರುವೆರ್ ಕುಡ್ಲ (ರಿ.) ಇದರ ಸ್ಥಾಪಕಾಧ್ಯಕ್ಷರಾದ ಉದಯ್ ಪೂಜಾರಿ ಇವರು ಸೆಪ್ಟೆಂಬರ್ 24 ರಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಶೋರೂಂ ಸಂಸ್ಥೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಲಕ್ಷ್ಮೀ ಇಂಡಸ್ಟ್ರೀಸ್ ನ ಮಾಲಕರಾದ ಮೋಹನ್ ಕುಮಾರ್ ರವರು ಸಂಸ್ಥೆಯ ವತಿಯಿಂದ ಗೌರವಿಸಿದರು.

ಇದನ್ನೂ ಓದಿ: 🔴ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭ
ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ಮಾದರಿ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ಸೇವಾ ಕಾರ್ಯಕ್ರಮಗಳಲ್ಲಿ ನಮ್ಮ ಬಿರುವೆರ್ ಕುಡ್ಲ ತಂಡ ಕೂಡ ಭಾಗವಹಿಸುವುದಾಗಿ ಉದಯ್ ಪೂಜಾರಿ ಭರವಸೆ ನೀಡಿದರು.



