Mon. Oct 13th, 2025

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸಿಕ್ಕ ಮತ್ತೊಂದು ಅಸ್ಥಿಪಂಜರದ ಗುರುತು ಪತ್ತೆ

ಬೆಳ್ತಂಗಡಿ : ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಎರಡನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಪತ್ತೆಹಚ್ಚಲಾಗಿತ್ತು. ಇದೀಗ ಮತ್ತೊಬ್ಬನ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಎಸ್.ಐ.ಟಿ ಪತ್ತೆ ಹಚ್ಚಿ ಕಚೇರಿಗೆ ಕರೆದು ಮಾಹಿತಿ ಕಲೆ ಹಾಕಿದೆ.

ಇದನ್ನೂ ಓದಿ: 🔴ಉಜಿರೆ: ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ಎಂಬ ವಿಷಯಾಧಾರಿತ ವಿಶೇಷ ಕಾರ್ಯಕ್ರಮ


2-10-2013 ರಂದು ಬೆಂಗಳೂರು ಬಾರ್ ಕೆಲಸಕ್ಕೆ ಹೋಗುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಬೋಜಪ್ಪ ಮತ್ತು ಚೆನ್ನಮ್ಮ ಮೂರನೇ ಮಗ ಆದಿಶೇಷ ನಾರಾಯಣ(27) ಯುವಕ ಮನೆಗೆ ಬಂದು ಮೊಬೈಲ್ ಇಟ್ಟು ಮನೆಬಿಟ್ಟು ನಾಪತ್ತೆಯಾಗಿದ್ದವನ ಅಸ್ಥಿಪಂಜರ ಎಂದು ಎಸ್.ಐ.ಟಿ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಮೂಲಕ ಪತ್ತೆಹಚ್ಚಿದೆ.

ಈ ಸಂಬಂಧ ಆದಿಶೇಷನ ಕುಟುಂಬ ಸದಸ್ಯರು ಸೆ.25 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಬಂದು ಡ್ರೈವಿಂಗ್ ಲೈಸೆನ್ಸ್ ಮತ್ತು ಫೋಟೋ ಮೂಲಕ ಖಚಿತ ಪಡಿಸಿಕೊಂಡು ನಾಪತ್ತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಎನ್.ಎ ಮಾಡಿಸುವುದಾಗಿ ಹೇಳಿ ಕಳುಹಿಸಿದ್ದಾರೆ ಎಂದು ಆದಿಶೇಷ ಅಕ್ಕ ಪದ್ಮ ಮಾಧ್ಯಮಗಳಿಗೆ ಮಾಹಿತಿ ನೀಡಿದರು.


ಆದಿಶೇಷ ನಾರಾಯಣ ಪದೇ ಪದೇ ಮನೆ ಬಿಟ್ಟು ಹೋಗಿ ವಾಪಸ್ ಬರುತ್ತಿದ್ದ ಕಾರಣದಿಂದ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಯಾರು ಕೂಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *