ಪುತ್ತೂರು: ವ್ಯಕ್ತಿಯೊಬ್ಬರು ತನ್ನ ಕೈಯನ್ನು ಕತ್ತರಿಸಿಕೊಂಡ ಘಟನೆ ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಇದನ್ನೂ ಓದಿ: ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ಎಬಿವಿಪಿ ಭರ್ಜರಿ ಗೆಲುವು
ಕೈಯನ್ನು ಕತ್ತರಿಸಿಕೊಂಡ ವ್ಯಕ್ತಿ ಕೇರಳ ಮೂಲದವರು ಎಂದು ತಿಳಿದುಬಂದಿದೆ.
ಬಸ್ ನಿಲ್ದಾಣದಲ್ಲಿ ಭಾರೀ ರಕ್ತಸ್ರಾವವಾಗಿತ್ತು. ಈ ವ್ಯಕ್ತಿ ಈ ಕೃತ್ಯಕ್ಕೆ ಯಾಕೆ ಮುಂದಾದರು ಎಂಬ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ. ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.


