Tue. Oct 14th, 2025

Ujire: ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಟೆಂಪೋ ಟ್ರಾವೆಲರ್ ಕೊಡುಗೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಟಿಟಿ (ಟೆಂಪೋ ಟ್ರಾವೆಲರ್) ವಾಹನ ಕೊಡುಗೆಯಾಗಿ ನೀಡಲಾಯಿತು.

ಇದನ್ನೂ ಓದಿ: 🔴ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ (ಸೆ.29) ರಂದು ಕರ್ಣಾಟಕ ಬ್ಯಾಂಕ್ ಚೇರ್ ಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಶ್ರೀನಿವಾಸ ಭಟ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್., ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಸಮ್ಮುಖದಲ್ಲಿ ವಾಹನದ ಕೀ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ವಾದಿರಾಜ ಭಟ್, ಉಡುಪಿ ರಥಬೀದಿ ಶಾಖೆಯ ಹಿರಿಯ ಪ್ರಬಂಧಕ ಪ್ರಶಾಂತ್ ಎಂ. ರಾವ್, ಎಸ್.ಡಿ.ಶಿಕ್ಷಣ ಸಂಸ್ಥೆಗಳ ಹಣಕಾಸು ಅಧಿಕಾರಿ ಅರವಿಂದ್ ಭಗವತ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *