Tue. Oct 14th, 2025

ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರು ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯನಿ ” ಮಹಾತ್ಮರ ಆದರ್ಶ ತತ್ವಗಳನ್ನು,

ಮಾರ್ಗಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಸಾಮರಸ್ಯದ ಬದುಕನ್ನು ನಾವು ನಡೆಸಬೇಕು ಎಂದರು. ಗಾಂಧೀಜಿಯವರ ಭಜನಾ ಹಾಡುಗಳನ್ನು ಹಾಡುವುದರ ಮೂಲಕ ಶಿಕ್ಷಕರು ಕಾರ್ಯಕ್ರಮಕ್ಕೆ ಹೊಸ ಮೆರುಗನ್ನು ನೀಡಿದರು.

Leave a Reply

Your email address will not be published. Required fields are marked *