ಕೊರಿಂಜ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿ ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು.

ಇದನ್ನೂ ಓದಿ: ಬೆಳ್ತಂಗಡಿ: ಮಾನವೀಯತೆ ಮೆರೆದ ಜೀವನ್ ಜ್ಯೋತಿ ಬಸ್ ಮಾಲಕರು ಹಾಗೂ ಡ್ರೈವರ್
ಸಭಾಧ್ಯಕ್ಷತೆಯನ್ನು ದೇವಸ್ಥಾನ ದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರು ವಹಿಸಿದ್ದರು. ಧಾರ್ಮಿಕ ಉಪನ್ಯಾಸ ಮಾಡಿದಂತಹ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರರಾದ ಡಾ! ರವೀಶ್ ಪಡುಮಲೆ ಇವರು ದೇವಸ್ಥಾನಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೌಲ್ಯಯುತ ಧಾರ್ಮಿಕ ಶಿಕ್ಷಣ, ಭಜನೆ, ಸಂಸ್ಕೃತಿ ಇವೆಲ್ಲವನ್ನೂ ಒಗ್ಗೂಡಿಸಿಕೊಂಡು ನಾವೆಲ್ಲಾ ನಡೆಯಬೇಕು.
ಕೊರಿಂಜ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆದು ಇದೀಗ ಪಂಚಲಿಂಗೇಶ್ವರನ ಸನ್ನಿಧಿಯಲ್ಲಿ ಮಕ್ಕಳ ಕುಣಿತ ಭಜನಾ ತಂಡವನ್ನು ದೀಪ ಪ್ರಜ್ವಲಿಸುವ ಮೂಲಕ ದೇ ಸ್ಥಾನದ ಶಕ್ತಿ ಹಾಗೂ ಭಕ್ತಿ ಬಹಳ ಹೆಚ್ಚಾಗಿದೆ. ಪ್ರತಿ ಮನೆಯಲ್ಲೂ ಸಂಜೆಯ ಸಮಯದಲ್ಲಿ ರಾಮಾಯಣ ಮಹಾಭಾರತ ಕಥೆಯನ್ನು, ಭಜನೆಯನ್ನು, ಮಕ್ಕಳ ಪೋಷಕರು ಕಲಿಸಬೇಕು.


ನಮ್ಮಲ್ಲಿ ಧಾರ್ಮಿಕತೆಯನ್ನು ಯಾವತ್ತು ಕೂಡ ಕಡಿಮೆ ಮಾಡ ಬಾರದು ಎಂದು ತಿಳಿಸಿದರು. ಭಜನ ಗುರುಗಳಾದ ನಾಗೇಶ ನೆರಿಯ ಇವರಿಗೆ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು.ವಾರಿಜ ವಿ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸೀತಾರಾಮ ಆಳ್ವ ಕೊರಿಂಜ ಕಾರ್ಯಕ್ರಮ ನಿರೂಪಿಸಿ,ರಂಜಿತ್ ಧರ್ಮಾಡಿ ಸ್ವಾಗತಿಸಿ ವಿಜಯ ಕುಮಾರ್ ಕಲ್ಲಳಿಕೆ ಇವರ ಧನ್ಯವಾದದೊಂದಿಗೆ ಮುಕ್ತಾಯವಾಯಿತು.

