ಮಂಗಳೂರು:(ಅ.11) ಕೇರಳ ಚಿತ್ರರಂಗದ ನಟ ಜಯಕೃಷ್ಣನ್ ಬಂಧನ ಆಗಿದೆ. ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪ ಅವರ ಮೇಲೆ ಇದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

🔴ಉಜಿರೆ: ಎಸ್.ಡಿ.ಎಂ ರಸಾಯನಶಾಸ್ತ್ರ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ
ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್, ಸಂತೋಷ್ , ವಿಮಲ್ ಊಬರ್ ಬುಕ್ ಮಾಡಿದ್ದರು. ಊಬರ್ ಕ್ಯಾಬ್ ಚಾಲಕ ಶಫೀಕ್ ಕಾರು ಬುಕ್ ಆಯಿತು. ಕರೆ ಮಾಡಿ ಎಲ್ಲಿಗೆ ಬರಬೇಕು ಎಂದು ಕೇಳಿದಾಗ, ಅವರು ಮೊದಲು ಹಿಂದಿಯಲ್ಲಿ ಮಾತನಾಡಿದ್ದರು. ಶಫೀಕ್ ಕನ್ನಡದಲ್ಲಿ ಮಾತನಾಡಿದಾಗ, ಮಲಯಾಳಂನಲ್ಲಿ ಮಾತನಾಡುವಂತೆ ಜಯಕೃಷ್ಣನ್ ಸೂಚಿಸಿದ್ದರು.

ಕರೆ ಮಾಡಿದಾಗ ಅಪ್ಪ-ಅಮ್ಮನಿಗೆ ಬೈದಿದ್ದಾರೆ. ಮುಸ್ಲಿಂ ಟೆರರಿಸ್ಟ್ ಎಂದೆಲ್ಲ ಹೇಳಿದ್ದಾರೆ ಎಂಬುದು ರಫೀಕ್ ಆರೋಪ. ‘ಮುಸ್ಲಿಂ ತೀರ್ವವಾದಿ, ಟೆರರಿಸ್ಟ್ ಅಂತಾ ಅಪಹಾಸ್ಯ ಮಾಡಿದ್ದಾರೆ. ಅವರಿಗೆ ಕಾರು ಬೇಡ. ಕ್ಯಾಬ್ನವರನ್ನು ಆಟ ಆಡಿಸೋಕೆ ಈ ರೀತಿ ಮಾಡಿದ್ದಾರೆ’ ಎಂದು ರಫೀಕ್ ದೂರಿದ್ದಾರೆ.


