Mon. Oct 13th, 2025

Belthangady: ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್
ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಅ.12 ರಂದು ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಬೆಳ್ತಂಗಡಿ: ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ವಿಶಿಷ್ಟ ಸೇವೆ ಸಲ್ಲಿಸಿದ ಸುಮಂತ್ ಕುಮಾರ್ ಮಾತನಾಡಿ ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ. ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ, ಯಶಸ್ಸು ನಿಮ್ಮದಾಗುತ್ತದೆ.ನಮ್ಮ ಕಾಲೇಜಿನಲ್ಲಿ ಕಲಿತು ಹೋದ ಮಕ್ಕಳು ಇಂದು ದೇಶದ ಪ್ರತಿಷ್ಠಿತ ಕಂಪನಿಗಳಲ್ಲಿ,ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ. ನಮ್ಮ ಮಕ್ಕಳು ದೇಶಕ್ಕೆ ಆಸ್ತಿಯಾಗಬೇಕು. ಹೆತ್ತವರಿಗೆ ಒಳ್ಳೆಯ ಮಗನಾಗಬೇಕು.ಹಾಗಾಗಿ ನಮ್ಮಲ್ಲಿ ಸಂಸ್ಕಾರಭರಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೇವೆ ಎಂದರು.

ಇಂದಿನ ಯುವ ಸಮಾಜಕ್ಕೆ ನಮ್ಮ ಸಂಸ್ಕೃತಿ,ಆಚಾರ ವಿಚಾರದ ಬಗ್ಗೆ ತಿಳಿಯಪಡಿಸುವ ಉದ್ದೇಶದಿಂದ ಹಲವಾರು ವಿಶಿಷ್ಟ, ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಯಾಗಿದ್ದೇವೆ.ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಾರ್ಯದರ್ಶಿ ರಂಜಿತ್ ಪೂಜಾರಿ,ನಿರ್ದೇಶಕರಾದ ಮನೋಹರ್ ಬಳಂಜ,ದಿನೇಶ್ ಪೂಜಾರಿ ಅಂತರ,ಯತೀಶ್ ವೈ ಎಲ್ ಬಳಂಜ, ಜಗದೀಶ್ ಪೂಜಾರಿ ಬಳ್ಳಿದಡ್ಡ,ಪ್ರವೀಣ್ ಡಿ ಕೋಟ್ಯಾನ್,ಯೋಗೀಶ್ ಕೊಂಗುಳ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *