ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ, ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದ, ದಿನೇಶ್ ಅಮ್ಮಣ್ಣಾಯರು ನಿಧನರಾಗಿದ್ದಾರೆ.

ಇದನ್ನೂ ಓದಿ: ⭕ಬೆಳಗಾವಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ವಿದ್ಯಾರ್ಥಿಗೆ ಶಿಕ್ಷೆ ನೀಡಿದ ಶಿಕ್ಷಕಿ
ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಅವರ ಅಗಲಿಕೆಯಿಂದ ಯಕ್ಷಗಾನ ಲೋಕಕ್ಕೆ ಭಾರಿ ನಷ್ಟವಾಗಿದೆ. ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿರುವ ಇವರು, ಯಕ್ಷಗಾನ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು.

ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದರಾದ, ತೆಂಕುತಿಟ್ಟು ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ ದಾಮೋದರ ಮಂಡೆಚ್ಚರ ಗರಡಿಯಲ್ಲಿ ಪಳಗಿದ ದಿನೇಶ್ ಅಮ್ಮಣ್ಣಾಯರು, ತಮ್ಮ ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಆರಂಭಿಸಿದ್ದು ವಿಶೇಷ. ಹಿಮ್ಮೇಳ ವಾದನದ ಅನುಭವದೊಂದಿಗೆ ಭಾಗವತಿಕೆಯತ್ತ ಹೊರಳಿದ ಅವರು, ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ರೂಪಿಸಿಕೊಂಡು ಯಶಸ್ವಿಯಾಗಿ ಅಗ್ರಮಾನ್ಯ ಸ್ಥಾನಕ್ಕೇರಿದ್ದರು.


