Sat. Oct 18th, 2025

Belthangady: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಅನುಮತಿ & ಕೊಠಡಿಗಳ, ಪ್ರಯೋಗಾಲಯಗಳ ನಿರ್ಮಾಣದ ಅನುದಾನಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: (ಅ.18) ಬೆಳ್ತಂಗಡಿ ತಾಲೂಕು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯು 1983 ರಲ್ಲಿ ಪ್ರಾರಂಭಗೊಂಡಿದ್ದು, 2025-26 ನೇ ಸಾಲಿನಲ್ಲಿ ಈವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ 580 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಇದನ್ನೂ ಓದಿ: ⭕ಉಡುಪಿ: ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆಗೆ ಶರಣು..!


ಈ ಕಾಲೇಜಿಗೆ ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಾತಿ ಪಡೆದಿರುತ್ತಾರೆ. ಪ್ರಸ್ತುತ ಕಾಲೇಜಿನಲ್ಲಿ BA, B.COM, BBA,M.A ಮತ್ತು M.COM ತರಗತಿಗಳು ನಡೆಯುತ್ತಿದೆ.

ಬೆಳ್ತಂಗಡಿಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 180 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ತಮ್ಮ ಮುಂದಿನ ಪದವಿ ವ್ಯಾಸಂಗಕ್ಕಾಗಿ ಹತ್ತಿರವಿರುವ ಖಾಸಗಿ ಕಾಲೇಜುಗಳಿಗೆ ಹೆಚ್ಚಿನ ಶುಲ್ಕವನ್ನು ಪಾವತಿಸಿ ವ್ಯಾಸಂಗ ಮಾಡಬೇಕಾಗಿರುತ್ತದೆ. ಪ್ರಸ್ತುತ ಬೆಳ್ತಂಗಡಿ ತಾಲೂಕಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗಗಳಿರುವುದಿಲ್ಲ,ಹೆಚ್ಚಿನ ವಿದ್ಯಾರ್ಥಿಗಳ ಮತ್ತು ಪೋಷಕರ ಬೇಡಿಕೆಯಂತೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಗೆ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲು ಮತ್ತು

ಅಗತ್ಯವಿರುವ 6 ಕೊಠಡಿಗಳನ್ನು ಮತ್ತು 2 ಪ್ರಯೋಗಾಲಯಗಳನ್ನು ನಿರ್ಮಿಸಲು ಅನುದಾನವನ್ನು ಒದಗಿಸಿಕೊಡಬೇಕೇಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿಯನ್ನು ಸಲ್ಲಿಸಿದರು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ. ಜಂಟಿ ನಿರ್ದೇಶಕರು ಕಾಲೇಜು ಶಿಕ್ಷಣ ಇಲಾಖೆಯ ಕವಿತಾ ಕೆ ಆರ್ ರವರಿಗೆ ಕಾಲೇಜಿಗೆ ಭೇಟಿ ನೀಡಿ ವರದಿಯನ್ನು ಸಲ್ಲಿಸುವಂತೆ ಸಚಿವರು ಸೂಚಿಸಿದರು.

Leave a Reply

Your email address will not be published. Required fields are marked *