Sat. Oct 18th, 2025

ಉಡುಪಿ:(ಅ.18) ಮನೆಯಲ್ಲೇ ಬಾಲಕಿ, ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಇದನ್ನೂ ಓದಿ: ಉಜಿರೆ:(ಅ.21) ಬೆನಕ ಹೆಲ್ತ್‌ ಸೆಂಟರ್‌ ಉಜಿರೆ ವತಿಯಿಂದ ಸಾನಿಧ್ಯ ಸಂಸ್ಥೆಯ ಮಕ್ಕಳೊಂದಿಗೆ ದೀಪಾವಳಿ ಸಂಭ್ರಮ

ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಬಾಲಕಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಬಾಲಕಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ, ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ತಿಳಿದು ಬಂದಿದೆ.

ನಗರ ಪೊಲೀಸ್​​ ಠಾಣೆಯ‌ ಎಸ್ಐ ಭರತೇಶ್, ಎಎಸ್ಐ ಪರಮೇಶ್ವರ್ .ಕೆ., ಎಎಸ್​ಐ ರಮೇಶ್, ಮುಖ್ಯ ಆರಕ್ಷಕ ಜಯಕರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ‌ ಒಳಕಾಡು ಎರಡು ಮೃತದೇಹಗಳನ್ನು ತೆರವುಗೊಳಿಸಿ ಆ್ಯಂಬುಲೆನ್ಸ್​ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೊಲೀಸ್​​ ಇಲಾಖೆಗೆ ನೆರವು ನೀಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಮಾಜಸೇವಕ ನಿತ್ಯಾನಂದ ಒಳಕಾಡು, “ಇಬ್ಬರೂ ಹೊರ ಜಿಲ್ಲೆಗಳಿಂದ ವಲಸೆ ಬಂದ ಕುಟುಂಬಕ್ಕೆ ಸೇರಿದವರು. ಯುವಕ ಸ್ವತಃ ಕೂಲಿ ಕಾರ್ಮಿಕನಾಗಿದ್ದಾನೆ. ಇಬ್ಬರೂ ಬಡವರು. ಇವರಿಬ್ಬರ ನಡುವೆ ಪ್ರೀತಿ ಪ್ರೇಮ ಇತ್ತು. ಆದರೆ, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಗೊತ್ತಾಗಿಲ್ಲ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *