ಬೆಳ್ತಂಗಡಿ: (ಅ.19) ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ

ಇದನ್ನೂ ಓದಿ: ⭕ಬೆಳ್ತಂಗಡಿ: ಅಕ್ರಮ ಕೋಳಿ ಅಂಕಕ್ಕೆ ಪೋಲಿಸ್ ದಾಳಿ
ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ ನಲ್ಲಿ ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ 70 ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾಳೆ.


ಇವಳು ಮೊಗ್ರು ಗ್ರಾಮ ದಂಡುಗ ನಿವಾಸಿ ಶ್ರೀಮತಿ ಶೀಲಾವತಿ ಜನಾರ್ಧನ ದಂಪತಿಗಳ ಸುಪುತ್ರಿ. ಇವಳ ಕ್ರೀಡಾ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದರು.

