Mon. Oct 20th, 2025

Devanahalli: ಪತಿ ಮನೆಯವರ ಕಿರುಕುಳದಿಂದ ಬೇಸತ್ತು ಡ್ಯಾಂ ಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ

ದೇವನಹಳ್ಳಿ(ಅ.20): ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. ಪುಷ್ಪಾವತಿ (30) ಮೃತರಾಗಿದ್ದು, 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಇವರ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುಷ್ಪಾವತಿ ನಾಪತ್ತೆ ಆಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಕುಟುಂಬಸ್ಥರು ಕೇಸ್​ ದಾಖಲಿಸಿದ್ದರು.

ಇದನ್ನೂ ಓದಿ: 🔴ಕಲ್ಲಡ್ಕ : ವೀರಕಂಭ ಮಾತೃಶ್ರೀ ಗೆಳೆಯರ ಬಳಗದ ರಜತಾ ಸಂಭ್ರಮದ ಸವಿನೆನಪಿಗಾಗಿ “ಮಾತೃಶ್ರೀ ಆಶ್ರಯ” ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ

ಪುಷ್ಪಾವತಿ ಆರೋಪವೇನು?
ನಾನು ಮದುವೆಯಾಗಿ ಗಂಡನ ಮನೆಗೆ ಹೋದ ದಿನದಿಂದ ನನ್ನ ಗಂಡ ನನ್ನ ಜೊತೆ ಸರಿಯಾಗಿ ಸಂಸಾರ ಮಾಡದೆ, ನನ್ನಿಂದ ದೂರ ಉಳಿಯುತ್ತಿದ್ದರು. ಸಂಸಾರ ಮಾಡಬೇಕೆಂದು ಎಷ್ಟು ಪ್ರಯತ್ನ ಪಟ್ಟರು ಗಂಡ ನನ್ನ ಜೊತೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಈ ವಿಚಾರವನ್ನು ನಮ್ಮ ಅತ್ತೆ ಮಾವನಿಗೆ ತಿಳಿಸಿದರೆ ಎಲ್ಲಾ ಸರಿ ಹೋಗುತ್ತೆ ಸುಮ್ಮನಿರು ಎಂದು ಆರಂಭದಲ್ಲಿ ಹೇಳುತ್ತಿದ್ದರು. ಗಂಡನಿಗೆ ನಾವು ಮಗು ಮಾಡಿಕೊಳ್ಳೋಣ ಎಂದು ಕೇಳಿದರೆ, ಈಗ ಮಗು ಬೇಡ 1-2 ವರ್ಷ ಹೋಗಲಿ ನಂತರ ಮಗು ಮಾಡಿಕೊಳ್ಳೋಣ.

ಈವಾಗ ಯಾಕೆ ಅರ್ಜೆಂಟ್ ಎಂದು ನನಗೆ ಬೈಯುತ್ತಿದ್ದರು. ನನಗೆ ಅನುಮಾನ ಬಂದು, ನಿನಗೇನಾದರೂ ತೊಂದರೆ ಇದ್ದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳೋಣ ಎಂದು ಗಂಡನಿಗೆ ತಿಳಿಸಿದ್ದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಅವರನ್ನು ಮುಟ್ಟಿದರೆ ಕಾಲಿನಿಂದ ನನ್ನ ಎದೆಗೆಲ್ಲ ಒದೆಯುತ್ತಿದ್ದರು. ಮಗು ಬೇಕು ಎಂದರೆ ನನ್ನ ಚಿಕ್ಕ ಮಗನ ಬಳಿ ಹೋಗು ಎಂದು ಅತ್ತೆ-ಮಾವ ಹೇಳುತ್ತಿದ್ದರು. ಮೈದುನನೂ ಅದೇ ರೀತಿ ಮಾತಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ನನ್ನ ಹೆತ್ತವರಿಗೆ ತಿಳಿಸಿದ್ದು, ಅವರು ಬಂದು ಹೇಳಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಪುಷ್ಪಾವತಿ ಆರೋಪಿಸಿದ್ದಾರೆ.

15 ದಿನಗಳ ಹಿಂದೆ ಗಂಡನ ಮನೆಯವರು ಸೇರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಈ ವೇಳೆ ನನ್ನನ್ನು ಎಳೆದಾಡಿದ ಪರಿಣಾಮ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿರುತ್ತಾರೆ. ನೀನು ಕಂಪ್ಲೇಂಟ್​ ಕೊಟ್ಟರೆ ಮತ್ತೆ ಮನೆಗೆ ಬರಲು ಸಾಧ್ಯವಿಲ್ಲ ಎಂದು ಮಾವ ಹೆದರಿಸಿದ್ದರು. ಮತ್ತೆ ಇದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಆಗಿದ್ದು, ಈ ವೇಳೆ ನಾನು ಪೊಲೀಸರಿಗೆ ದೂರು ಕೊಡೋದಾಗಿ ಹೇಳಿದ್ದೆ. ಆಗ ನನ್ನ ಕತ್ತು ಹಿಸುಕಿ ಮನೆಯಿಂದ ಆಚೆ ಹಾಕಿದ್ದಾರೆ. ಇದನ್ನು ಪ್ರಶ್ನಿಸಲು ನನ್ನ ತಮ್ಮ ಹೋದಾಗ ಆತನ ಮೇಲೆಯೂ ಹಲ್ಲೆ ಮಾಡಿದ್ದು, ಆತ ದೊಡ್ಡಬಳ್ಳಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದ ಎಂದು ಪುಷ್ಪಾವತಿ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *