ಉಳ್ಳಾಲ:(ಅ.20) ಅಪ್ರಾಪ್ತೆಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ ಎಂಬಾತನನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.

ಇದನ್ನೂ ಓದಿ: ⭕Devanahalli: ಪತಿ ಮನೆಯವರ ಕಿರುಕುಳದಿಂದ ಬೇಸತ್ತು ಡ್ಯಾಂ ಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ
ಘಟನೆ ವಿವರ:
ಸಂತ್ರಸ್ತೆಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ ಹಾಗೂ ಅಪ್ರಾಪ್ತೆ ಮಲಗಿದ್ದ ಸಂದರ್ಭದಲ್ಲಿ ಆರೋಪಿ ಅಮೀರ್ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂದರ್ಭ ಅಪ್ರಾಪ್ತೆ ಕಿರುಚಾಡಿದಾಗ ಆಕೆಯ ಬಾಯಿಗೆ ತಲೆದಿಂಬು ಇಟ್ಟು ಬಾಯಿ ಮುಚ್ಚಿಸಿದ್ದ ಎಂದು ಆರೋಪಿಸಲಾಗಿದೆ.


ಈ ಘಟನೆ ಬಳಿಕ ಸಂತ್ರಸ್ತೆಯು ಅಜ್ಜಿ ಮನೆಯಲ್ಲಿ ವಾಸವಾಗಿ ಅಲ್ಲಿಂದಲೇ ಶಾಲೆಗೆ ಹೋಗುತ್ತಿದ್ದಳು. ಕೆಲ ಸಮಯದ ಬಳಿಕ ಮಲತಂದೆ ಇರುವಾಗಲೇ ತಾಯಿಯನ್ನು ನೋಡಲು ಬರುತ್ತಿದ್ದ ಆಕೆ, ಈ ವಿಚಾರವನ್ನು ತನ್ನ ತಾಯಿಗೆ ತಿಳಿಸಿದ್ದಾಳೆ. ಈ ವಿಚಾರ ಅಜ್ಜಿ ಮನೆಯವರಿಗೂ ಗೊತ್ತಾಗಿದ್ದು, ಬಳಿಕ ಸಂತ್ರಸ್ತೆ ಯುವತಿಯು ಉಳ್ಳಾಲ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಪ್ರಾಪ್ತೆ ಯುವತಿಯನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅತ್ಯಾಚಾರ ಎಸಗಿದ್ದು ಬೆಳಕಿಗೆ ಬಂದಿದೆ.

ಆರೋಪಿ ಅಮೀರ್ ವಿರುದ್ಧ ಪೊಕ್ಸೋ ಪ್ರಕರಣ ದಾಖಲಿಸಿದ ಪೊಲೀಸರು ರವಿವಾರ ಆತನನ್ನು ಬಂಧಿಸಿದ್ದಾರೆ.
