ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: 🔴ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025
ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಎಂಬಾತನೇ ಮೃತ ವ್ಯಕ್ತಿಯಾಗಿದ್ದಾರೆ.
ವಿಪರೀತ ಕುಡಿತದ ಚಟ ಹೊಂದಿದ್ದ ಈತ ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು, ಆತನನ್ನು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಆತ ಚಿಕಿತ್ಸೆಗೆ ಸ್ಫಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ಸಹೋದರ ಬಾಬು ನೀಡಿರುವ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


