ಧರ್ಮಸ್ಥಳ:(ಅ.24) ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ 58ನೇ ಪಟ್ಟಾಭಿಷೇಕದ ವರ್ಧಂತ್ಯುತ್ಸವವು ಅ.24ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಜರುಗಿತು.

ಇದನ್ನೂ ಓದಿ: 🍁ಉಜಿರೆ: ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರದಲ್ಲಿ ದೀಪಾವಳಿ ಸಡಗರ
ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಪುಸ್ತಕ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷ ಹರೀಶ್ ಕುಮಾರ್, ಡಿ.ಸುರೇಂದ್ರ ಕುಮಾರ್, ಇಸ್ಕಾನ್ ಸಂಸ್ಥೆಯ ಶ್ರೀರಾಮ್, ಟಾಟಾ ಕಂಪೆನಿಯ ಚರಣ್ ಗುರುಮೂರ್ತಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಉದ್ಯೋಗಿ ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರನ್ನು ಸನ್ಮಾನಿಸಲಾಯಿತು.
ಮಣೆಗಾರ್ ವಸಂತ ಮಂಜಿತ್ತಾಯ ಮತ್ತು ಬಳಗದವರ ವೇದಘೋಷ ಬಳಿಕ, ಎಸ್ ಡಿ ಎಂ ಸೊಸೈಟಿ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ ಸ್ಟ್ರಕ್ಷನ್ ನ ಯಶೋಧರ ವಂದಿಸಿದರು.
ಉಜಿರೆಯ ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕ ಸುನೀಲ್ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು.


