ಕೊಕ್ಕಡ:(ಅ.24) ಸೌತಡ್ಕ “ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್” ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭವು ಅ.24ರಂದು ನಡೆಯಿತು.

ಇದನ್ನೂ ಓದಿ: 💐ಧರ್ಮಸ್ಥಳ: ಯು ಪ್ಲಸ್ ಟಿವಿ ಉಜಿರೆ ವತಿಯಿಂದ ಪೂಜ್ಯ ಖಾವಂದರಿಗೆ ಗೌರವಾರ್ಪಣೆ
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ರವರು ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರಿನ ಎಂ.ಆರ್.ಜಿ. ಗ್ರೂಪ್ ನ ಪ್ರಸಾದ್ ಶೆಟ್ಟಿ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಪೆರ್ನೆ ರಾಜ್ ಬೋರ್ ವೆಲ್ಸ್ ಮಾಲಕ ಕೃಷ್ಣರಾಜ್, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು,


ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಪುತ್ತೂರಿನ ಉದ್ಯಮಿ ಎಸ್ ಆರ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ನ ಶಿವಪ್ರಸಾದ್ , ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಕೃಷ್ಣ ಶೆಟ್ಟಿ ಕಡಬ, ವಿದ್ಯಾವರ್ಧಕ ಸಂಘದ ವೆಂಕಟರಮಣ ಹಾಗೂ ಕಟ್ಟಡ ನಿರ್ಮಾಣ ಸಮಿತಿ ಕಾರ್ಯದರ್ಶಿ ರಾಘವೇಂದ್ರ ನಾಯಕ್ ರವರು ಉಪಸ್ಥಿತರಿದ್ದರು.
ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹರೀಶ್ ರಾವ್ ಪ್ರಸ್ತಾವಿಸಿ ಸ್ವಾಗತಿಸಿದರು. ಕಟ್ಟಡ ನಿರ್ಮಾಣ ಸಮಿತಿಯ ಸರ್ವ ಸದಸ್ಯರು ಸಹಕರಿಸಿದರು.


