Sat. Oct 25th, 2025

Ballari: ಶಬರಿಮಲೆಯಲ್ಲಿ ಕಳವಾದ ಚಿನ್ನಕ್ಕೂ ಬಳ್ಳಾರಿಗೂ ಲಿಂಕ್ – ಜ್ಯುವೆಲ್ಲರಿ ಮಾಲೀಕ ಹೇಳಿದ್ದೇನು?

ಬಳ್ಳಾರಿ(ಅ.25): ಶಬರಿಮಲೆ ಅಯ್ಯಪ್ಪ ದೇವಾಲಯದ ಚಿನ್ನ ಕಳ್ಳತನ ಪ್ರಕರಣ ತನಿಖೆ ವೇಗ ಪಡೆದುಕೊಂಡಿದೆ. 4 ಕೆಜಿ ಚಿನ್ನ ಕಳುವಾದ ಪ್ರಕರಣದಲ್ಲಿ ಕೇರಳ ಎಸ್‌ಐಟಿ ತಂಡವು ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮೇಲೆ ದಾಳಿ ನಡೆಸಿದ್ದು, ಚಿನ್ನದಂಗಡಿಯ ಮಾಲೀಕ ಚಿನ್ನ ಖರೀದಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಚಿನ್ನ ಮಾರಾಟ ಮಾಡಿದ ಉನ್ನಿಕೃಷ್ಣನ್‌ ಮನೆ ಮೇಲೆ ಶುಕ್ರವಾರ ಎಸ್​ಐಟಿ ದಾಳಿ ನಡೆಸಿದ್ದು, ಆತನ ಮನೆಯನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: 💐ಧರ್ಮಸ್ಥಳ: ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್‌ ಕನಸಿನ ಮನೆ ಮಾಲಕ ಕೆ.ಮೋಹನ್‌ ಕುಮಾರ್‌ ರವರಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಬಳ್ಳಾರಿ ಚಿನ್ನದಂಗಡಿ ಮಾಲೀಕ ಹೇಳಿದ್ದೇನು?
ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಶಬರಿಮಲೆಯಲ್ಲಿ ಕಳ್ಳತನ ಆದ ಚಿನ್ನ ಎನ್ನುವುದು ಗೊತ್ತಿರದ ಕಾರಣ ನಾನು ಚಿನ್ನ ಖರೀದಿ ಮಾಡಿದ್ದೆ.ಕದ್ದಿದ್ದ ಚಿನ್ನ ಎಂದು ಗೊತ್ತಿದ್ದರೆ ಖರೀದಿ ಮಾಡುತ್ತಿರಲಿಲ್ಲ ಎಂದು ಗೋವರ್ಧನ್ ಕೇರಳ ಎಸ್ಐಟಿ ಮುಂದೆ ಹೇಳಿಕೊಂಡಿದ್ದಾನೆ. ಇದನ್ನು ಕೇಳಿದ ಅಧಿಕಾರಿಗಳು ಮುಂದೇನಾದರೂ ಅಗತ್ಯವಿದ್ದರೆ ತನಿಖೆಗೆ ಕರೆದಾಗ ಬರಬೇಕಾಗುತ್ತದೆ ಎಂದು ಹೇಳಿ ಹೊರಟಿದ್ದಾರೆ.

ದೇವಾಲಯದ ದ್ವಾರಪಾಲಕ ಮೂರ್ತಿಗಳಿಂದ 475 ಗ್ರಾಂ ಚಿನ್ನದ ಪ್ಲೇಟ್ ಕದ್ದ ಆರೋಪ ಎದುರಿಸುತ್ತಿರುವ ಉನ್ನಿಕೃಷ್ಣನ್ ಈಗ ಕೇರಳ ಎಸ್ಐಟಿ ವಶದಲ್ಲಿದ್ದಾನೆ. ಕಳುವಾದ ಚಿನ್ನವನ್ನು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್‌ಗೆ ಮಾರಾಟ ಮಾಡಿದ ಆರೋಪ ತನಿಖೆಗೊಳಪಟ್ಟಿದ್ದು, ಬಳ್ಳಾರಿ ಹಾಗೂ ಬೆಂಗಳೂರಿನಲ್ಲಿ ದಾಳಿ ಮುಂದುವರೆದಿದೆ.

Leave a Reply

Your email address will not be published. Required fields are marked *