ಬೆಳ್ತಂಗಡಿ: (ಅ.27) ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ (ರಿ.) ಬೆಂಗಳೂರು ಇವರು ಗೌರವಿಸುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಎಸ್.ಡಿ.ಎಂ ಬೆಳಾಲು ಪ್ರೌಢಶಾಲೆ ಹಾಗೂ ಕಬಡ್ಡಿ ತರಬೇತುದಾರರಾದ ಕೃಷ್ಣಾನಂದ ರಾವ್ ರವರು ಆಯ್ಕೆಯಾಗಿದ್ದರು.

ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ, ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ಇವರ ಸಮ್ಮುಖದಲ್ಲಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿಯನ್ನು ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಬಡ್ಡಿ ತರಬೇತುದಾರ ಕೃಷ್ಣಾನಂದ ರಾವ್ ಪಡೆದುಕೊಂಡರು.





