Mon. Oct 27th, 2025

Belthangady: ತಿಮರೋಡಿ ಗಡಿಪಾರು ಆದೇಶ ಪ್ರಕರಣ – ಮಹೇಶ್ ಶೆಟ್ಟಿ ಪರ ಪ್ರತಿಭಟನೆಗೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಳ್ತಂಗಡಿ:(ಅ.27) ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ಸಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರ ಮುಖಾಂತರ ಅ.27ರಂದು ಮನವಿ ನೀಡಲು ಬಂದ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದರು.

ಇದನ್ನೂ ಓದಿ: ⭕ಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಸುಜಾತ ಭಟ್ ಹಾಜರು

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆದೇಶ ಬಾಕಿಯಿರುವ ಕಾರಣದಿಂದ ಯಾವುದೇ ಪ್ರತಿಭಟನೆಗಳನ್ನು ಮಾಡಲು ಅವಕಾಶವಿಲ್ಲ ಹಾಗೂ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಳ್ತಂಗಡಿ ಪೊಲೀಸರು ಅನುಮತಿಯನ್ನು ನಿರಾಕರಿಸಿ ಹಿಂಬರಹ ನೀಡಿದ್ದರೂ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರನ್ನು ಮನವಿ ನೀಡಲು ಬಂದ ಹಿನ್ನೆಲೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ ಕೆವಿ, ಸೇರಿದಂತೆ ಐದು ಜನರನ್ನು ಬಂಧಿಸಿರುತ್ತಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *