Tue. Oct 28th, 2025

Bengaluru: RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ – ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು(ಅ.28): ಕಲಬುರಗಿಯ ಚಿತ್ತಾಪುರದಲ್ಲಿ ಆರ್​​ಎಸ್​ಎಸ್ ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ : ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ‌

ಪಥಸಂಚಲನ ನಿರ್ಬಂಧಿಸುವ ಸಂಬಂಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್​ಎಸ್​​ಎಸ್ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರ್ಕಾರದ ಕ್ರಮ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್​ಗೆ ನೋಟಿಸ್ ನೀಡಿದೆ.

ಆರ್​ಎಸ್​ಎಸ್ ಪಥಸಂಚಲನ ನಿರ್ಬಂಧ ಬಗ್ಗೆ ಹೈಕೋರ್ಟ್ ಹೇಳಿದ್ದೇನು?

2025 ರ ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್​ಎಸ್​​ಎಸ್ ಪ್ರಶ್ನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.

Leave a Reply

Your email address will not be published. Required fields are marked *