State weather report: ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ: ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ
ಇಂದು ಸಂಜೆ ಅಥವಾ ರಾತ್ರಿ ಆಂಧ್ರ, ಒಡಿಶಾ ಕರಾವಳಿ ಭಾಗಕ್ಕೆ ಮೊಂಥಾ ಚಂಡಮಾರುತ ಅಪ್ಪಳಿಸಲಿದೆ. ಪರಿಣಾಮ ಎರಡು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ಬೀದರ್, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸೇರಿದಂತೆ ಅನೇಕ ಜಿಲ್ಲೆಗಳಿಗೆ ಎರಡು ದಿನ ಯಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಅಕ್ಟೋಬರ್ 28 ಹಾಗೂ 29ರಂದು ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.





