ಉಜಿರೆ:(ಅ.28)ಬೆಳ್ತಂಗಡಿ ತಾಲೂಕಿನ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಎಸ್.ಡಿ.ಎಮ್ ಪದವಿ ಕಾಲೇಜಿನ ಸಂಸ್ಕೃತ ವಿಭಾಗದ ವತಿಯಿಂದ ತಾಲೂಕು ಮಟ್ಟದ ಭಗವದ್ಗೀತ ಸ್ಪರ್ಧೆ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದು,

ಇದನ್ನೂ ಓದಿ: ⭕ಬೆಂಗಳೂರು: RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ರಸಪ್ರಶ್ನೆ ಸ್ಪರ್ಧೆಯಲ್ಲಿ 9ನೇ ತರಗತಿ ನಿನಾದ್ ಹಾಗೂ 10ನೇ ತರಗತಿ ಅನಿರುದ್ಧ ದ್ವಿತೀಯ ಸ್ಥಾನ, ಭಾಷಣ ಸ್ಪರ್ಧೆಯಲ್ಲಿ ಹಿರಿಯ ವಿಭಾಗ 9ನೇ ತರಗತಿ ಸಿದ್ಧಾಂತ್ ದ್ವಿತೀಯ, ಕಿರಿಯ ವಿಭಾಗ 7ನೇ ತರಗತಿ ಗಾನಪ್ರಿಯ ದ್ವಿತೀಯ, ಗೀತಾ ಕಂಠಪಾಠ 8ನೇ ತರಗತಿ ಸಾನ್ವಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.




