ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಸುರತ್ಕಲ್ ಕೃಷ್ಣಾಪುರದಲ್ಲಿ ನಡೆದಿದೆ. ಕೃಷ್ಣಾಪುರ ನಿವಾಸಿ ಅನನ್ಯ(20) ನಾಪತ್ತೆಯಾದ ಯುವತಿ.

ಅನನ್ಯ ಕಾರ್ತಿಕ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಅಕ್ಟೋಬರ್ 25 ರಂದು ತಂದೆ ತಾಯಿ ಕೆಲಸಕ್ಕಾಗಿ ಹೊರಗಡೆ ಹೋದವರು ವಾಪಾಸ್ ಮಧ್ಯಾಹ್ನ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಅನನ್ಯ ಇರಲಿಲ್ಲ. ಅಕ್ಕಪಕ್ಕದವರನ್ನು ವಿಚಾರಿಸಿದಾಗ ಆಕೆ ಬೆಳಿಗ್ಗೆ ಮನೆಯಿಂದ ಹೋಗಿದ್ದಾಳೆ ಎಂದಿದ್ದಾರೆ. ಬಳಿಕ ಪೋಷಕರು ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಣೆಯಾದವರ ಚಹರೆ:- ಎತ್ತರ: 5.3 ಅಡಿ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಶರೀರ, ದಪ್ಪ ಸೈಝ್ ಕನ್ನಡಕ
ಮತ್ತು ಕಾಣೆಯಾದ ದಿನ ಕೆಂಪು ಬಣ್ಣದ ಟೀ ಶರ್ಟ್, ಹಳದಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




