ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಪೋಷಕರ ಸಭೆಯನ್ನು ನಡೆಸಲಾಯಿತು.

ಇದನ್ನೂ ಓದಿ: 🔴ಉಜಿರೆ: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶೀನಪ್ಪ ಗೌಡ ವಹಿಸಿದ್ದರು.
ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯ ದೃಷ್ಟಿಯಲ್ಲಿ ಪೋಷಕರೊಂದಿಗೆ ಸಂವಾದ ನಡೆಸಿದರು.


ಕಾಲೇಜಿನ 2025ನೇ ಸಾಲಿನ ವಾರ್ಷಿಕ ವರದಿಯನ್ನು ಇಂಗ್ಲಿಷ್ ಉಪನ್ಯಾಸಕರಾದ ಪುರುಷೋತಮ ಶೆಟ್ಟಿ ವಾಚಿಸಿದರು.
ಕಾಲೇಜಿನ ಪ್ರಾಂಶುಪಾಲೆ ಗೀತಾ ಸ್ವಾಗತಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿದರು.
ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ವಂದಿಸಿದರು.



