Fri. Oct 31st, 2025

Puttur: ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಹುಚ್ಚಾಟ ಮೆರೆದ ಸ್ಕೂಟಿ ಸವಾರ ಅರೆಸ್ಟ್‌

ಪುತ್ತೂರು:(ಅ.31) ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಮಾಡಿದ ಬೈಕ್ ಸವಾರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಟ್ಟಂಪಾಡಿ ಗ್ರಾಮದ ಮಹಮ್ಮದ್ ಮನ್ಸೂರ್ (38) ಬಂಧಿತ ಆರೋಪಿ.

ಇದನ್ನೂ ಓದಿ: 🔴ಉಜಿರೆ: ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ವತಿಯಿಂದ

ದಿನಾಂಕ 30.10.2025 ರಂದು ಬಿಸಿಲೆ ಘಾಟ್ ನಲ್ಲಿ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಅಂಬ್ಯುಲೆನ್ಸ್ ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ

ಸಮಯ ಮಧ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್‌ ನಿಂದ ಅಂಬ್ಯುಲೆನ್ಸ್ ಮುಂದಿನಿಂದ ಬೈಕ್ ಸವಾರ ಅಂಬ್ಯುಲೆನ್ಸ್ ನ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸ್ ಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಮಹಮ್ಮದ್ ಮನ್ಸೂರ್ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಅ.ಕ್ರ 128/2025 ಕಲಂ: 110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೋಲಿಸ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *