Fri. Oct 31st, 2025

Shivamogga: ಆಸ್ಪತ್ರೆಯಲ್ಲಿ ಜೀವ ಬಿಟ್ಟ ಹೆಂಡತಿ – ಮೃತದೇಹವನ್ನು ಅಲ್ಲೇ ಬಿಟ್ಟು ಗಂಡನ ಮನೆಯವರೆಲ್ಲ ಪರಾರಿ

ಶಿವಮೊಗ್ಗ: ಗಂಡನ ಮನೆಯಲ್ಲಿ ಕಿರುಕುಳ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿದ್ದ ಗೃಹಿಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜೀವ ಬಿಟ್ಟಿರುವ ಘಟನೆ ಎನ್‌ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆ ಸಾವನ್ನಪ್ಪುತ್ತಿದ್ದಂತೆ ಗಂಡನ ಮನೆಯವರೆಲ್ಲ ಪರಾರಿ ಆಗಿದ್ದಾರೆ.

ಇದನ್ನೂ ಓದಿ: 🔴ಉಜಿರೆ: ಉಜಿರೆಯಲ್ಲಿ ವಿಕಲಚೇತನರ ಗ್ರಾಮ‌ ಸಭೆ

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಶಂಕರಳ್ಳಿ ಈಶ್ವರಪ್ಪ ಎಂಬುವರ ಪುತ್ರಿ ಪೂಜಾ (30) ಮೃತ ದುರ್ದೈವಿ. ಮೂರು ವರ್ಷಗಳ ಹಿಂದೆ ತಾಲೂಕಿನ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಎಂಬುವನೊಂದಿಗೆ ಪೂಜಾಳನ್ನು ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿಗೆ ಎರಡೂವರೆ ವರ್ಷದ ಗಂಡು ಮಗು ಕೂಡ ಇತ್ತು.

ಆದರೆ ಗಂಡನ ತಂದೆ, ತಾಯಿ ಹಾಗೂ ಸಹೋದರಿ ಸೇರಿ ಸೊಸೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ಇದರಿಂದ ಬೇಸತ್ತ ಪೂಜಾ, ತಾಯಿ ಮನೆಗೆ ಬಂದು ತನ್ನ ಸಂಕಷ್ಟಗಳನ್ನೆಲ್ಲ ಹೇಳಿಕೊಂಡಿದ್ದಳು. ಆದರೂ ತವರು ಮನೆಯವರು ಸಮಾಧಾನ ಮಾಡಿ ವಾಪಸ್ ಕಳುಹಿಸಿದ್ದರು. ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳು.

ಇದನ್ನು ನೋಡಿದ್ದ ಮನೆಯವರು ತಕ್ಷಣ ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪತಿ ಶರತ್ ಹಾಗೂ ಆತನ ತಂದೆ, ತಾಯಿ ಎಲ್ಲರೂ ಮೃತದೇಹ ಹಾಗೂ ಪುಟ್ಟ ಕಂದನ ಬಿಟ್ಟು ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *