ಬಂಟ್ವಾಳ (ನ.1) : ಬಿಸ್ಲೆ ಘಾಟ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್‌ಗೆ ದಾರಿ ಬಿಡದ ಬೈಕ್ ಸವಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ಈ ಹಿನ್ನೆಲೆ ಬೈಕ್ ಸವಾರನಿಗೆ ಕೋರ್ಟ್ ಗಂಭೀರ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: 🔶ಮಂಜೊಟ್ಟಿ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ
ಅಂಬುಲೆನ್ಸ್‌ಗೆ ದಾರಿ ಬಿಡದೆ ಬೈಕ್ ಸವಾರನ ದುಸ್ಸಾಹಸ:
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಳಿ ಅಂಬುಲೆನ್ಸ್‌ಗೆ ದಾರಿ ಬಿಡದೆ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ಮಹಮ್ಮದ್ ಮನ್ಸೂರು ಎಂಬ ಬೈಕ್ ಸವಾರ ಅಡ್ಡಗಟ್ಟಿದ್ದ. ಸುಮಾರು 3–4 ಕಿಲೋಮೀಟರ್‌ಗಳಷ್ಟು ಹಠದಿಂದ ಹಿಂಬಾಲಿಸಿ, ಗಾಯಾಳುಗಳಿದ್ದ ಅಂಬುಲೆನ್ಸ್‌ಗೆ ಸಮಸ್ಯೆ ನೀಡಿದ್ದ. ಅಂಬುಲೆನ್ಸ್ ಸಿಬ್ಬಂದಿ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ಬೈಕ್ ಸವಾರನಿಗೆ ನ್ಯಾಯಾಂಗ ಬಂಧನ:
ವೀಡಿಯೊ ಆಧರಿಸಿ ಬಂಟ್ವಾಳ ನಗರ ಪೊಲೀಸರು ಮನ್ಸೂರನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೊಪ್ಪಿಸಿದ್ದಾರೆ. ತುರ್ತು ಸೇವೆಗೆ ಅಡ್ಡಿ ಮಾಡಿರುವ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿದ ಬಂಟ್ವಾಳ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ತುರ್ತು ಸೇವೆಗಳನ್ನು ತಡೆದು ಸಾರ್ವಜನಿಕ ಸುರಕ್ಷತೆಯನ್ನು ಲೆಕ್ಕಿಸದವರ ವಿರುದ್ಧ ಕಾನೂನು ಬಿಗಿಯಾದ ಕ್ರಮ ಕೈಗೊಳ್ಳುತ್ತಿರುವುದು ಈ ಪ್ರಕರಣದಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ. ಜನರು ಮಾನವೀಯತೆ ಮತ್ತು ಸಂಚಾರ ನಿಯಮಗಳನ್ನು ಪಾಲಿಸುವುದು ಅತ್ಯಂತ ಅಗತ್ಯ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.




