Sat. Nov 1st, 2025

Manjotti: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

ಮಂಜೊಟ್ಟಿ: (ನ.1) ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇದನ್ನೂ ಓದಿ: 🔴ಬೆಳ್ತಂಗಡಿ: ಚಾರ್ಮಾಡಿ: ಪಿ. ಪದ್ಮನಾಭ ಗೌಡ ಪುತ್ತಿಲ ನಿಧನ – ಜೀವಿತಾವಧಿಯಲ್ಲೇ ಕರಾರು

ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸ್ಟಾರ್ ಲೈನ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಜನಾಬ್ ಸೈಯದ್ ಹಬೀಬ್ ಸಾಹೇಬ್ ಇವರು ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಶ್ರೀಯುತ ಸೈಯದ್ ಅಯ್ಯುಬ್ ಕೋಶಾಧಿಕಾರಿಯಾದ ಶ್ರೀಯುತ ಸಯ್ಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.

ಶಾಲೆಯ ಕನ್ನಡ ಶಿಕ್ಷಕಿ ಕುಮಾರಿ ಶ್ವೇತ ಇವರು ರಾಜ್ಯೋತ್ಸವದ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಅತಿಥಿಗಳಿಗೆ ಧನ್ಯವಾದವನ್ನು ಕೋರಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು.

Leave a Reply

Your email address will not be published. Required fields are marked *