ಬೆಳ್ತಂಗಡಿ : (ನ. 02) ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಪೊಲೀಸರು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ಜೈ ಭಜರಂಗ ಬಲಿ ತುಳು ನಾಟಕ ನವೆಂಬರ್ 01 ರಂದು ಸಂಜೆ 06 ಗಂಟೆಗೆ ಸರಿಯಾಗಿ ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಜೈನ್ ಪೇಟೆಯಲ್ಲಿ ಅಪಾರ ಜನಸ್ತೋಮದ ನಡುವೆ ಯಶಸ್ವಿ ಪ್ರದರ್ಶನಗೊಂಡಿತು.


ಇದನ್ನೂ ಓದಿ: 🟣ಧರ್ಮಸ್ಥಳ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ದೀಪ ಬೆಳಗಿಸಿ ಉದ್ಘಾಟನೆಗೈದು, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಷಣೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಪ್ರದರ್ಶನಕ್ಕೆ ಸಹಕರಿಸಿದ ಆಗಮಿಸಿದ ಕಲಾಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ ಚಾರ್ಮಾಡಿ, ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶರತ್, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷರಾದ ಸುಧೀರ್ ಸುವರ್ಣ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್ ಹಾಗೂ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾರದಾ ಆರ್ಟ್ಸ್ ಐಸಿರಿ ಕಲಾವಿದೆರ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ತುಳುನಾಡ ಹಿಂದೂ ರತ್ನ ಬಿರುದು ನೀಡಿ ಗೌರವಿಸಿದರು, ಕೊಯ್ಯೂರಿನ ಯುವತಿ ಮೋನಿಕಾ ನಿರ್ಮಿಸಿದ ಆರ್ಯನ್ ಬಂದ ಕನ್ನಡ ಟೆಲಿ ಫಿಲಂ ಟೈಟಲ್ ಶಾಸಕ ಹರೀಶ್ ಪೂಂಜಾರವರು ಬಿಡುಗಡೆಗೊಳಿಸಿದರು. ಅಪಾರ ಜನಸ್ತೋಮ ಆಗಮಿಸಿ ನಾಟಕ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ್ ಲಾಯಿಲ ಕಾರ್ಯಕ್ರಮ ನಿರ್ವಹಿಸಿದರು.





