Sun. Nov 2nd, 2025

Dharmasthala: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ:(ನ.2) ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2. ಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಕೆ ನಂದ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ತಾಯಿ ಭುವನೇಶ್ವರಿ ದೇವಿಗೆ ದೀಪವನ್ನು ಬೆಳಗಿಸಿ, ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ನಮನವನ್ನು ಸಲ್ಲಿಸಲಾಯಿತು.

ಮಕ್ಕಳು ಕನ್ನಡ ನಾಡು ನುಡಿಗೆ ಸಂಬಂಧಿಸಿದ ಹಾಡನ್ನು ಹಾಡುವುದರ ಮೂಲಕ ಕನ್ನಡಾಂಬೆಗೆ ನಮನವನ್ನು ಸಲ್ಲಿಸಿದರು. ಕನ್ನಡ ಕನ್ನಡ ನಾಡು ನುಡಿಯ ಇತಿಹಾಸ,ಹಿರಿಮೆ- ಗರಿಮೆಯನ್ನು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಮಕ್ಕಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ಬಿ ಎಡ್ ಮತ್ತು ಡಿಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ಹಂಚಲಾಯಿತು. ನಿರೂಪಣೆ, ಸ್ವಾಗತ ಮತ್ತು ಧನ್ಯವಾದ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್. ನಿರ್ವಹಿಸಿದರು.

Leave a Reply

Your email address will not be published. Required fields are marked *