Sun. Nov 2nd, 2025

Puttur: ಕಾರು & ಆಟೋ ನಡುವೆ ಭೀಕರ ಅಪಘಾತ – ನಾಲ್ಕೂವರೆ ವರ್ಷದ ಕಂದಮ್ಮ ದಾರುಣ ಸಾವು

ಪುತ್ತೂರು: (ನ.2): ಆಟೋಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ಕೂವರೆ ವರ್ಷದ ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಪುತ್ತೂರು ತಾಲೂಕಿನ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಸೇರಿ ಐವರು ಗಾಯಗೊಂಡಿದ್ದು, ಬಸ್​​ ಓವರ್​ಟೇಕ್​ ಮಾಡಲು ಹೋಗಿ ಆಟೋಗೆ ಕಾರು ಡಿಕ್ಕಿಯಾಗಿದೆ.

ಇದನ್ನೂ ಓದಿ: ⭕ಮಂಗಳೂರು: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್​ನ ಬರ್ಬರ ಹತ್ಯೆ

ಸುಳ್ಯ ಕಡೆಯಿಂದ ಪುತ್ತೂರಿನತ್ತ ತೆರಳುತ್ತಿದ್ದ ಕಾರು ಚಾಲಕ ಬಸ್​ನ ಓವರ್​ಟೇಕ್​ ಮಾಡಲು ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಪುತ್ತೂರಿನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಆಟೋ ಚಾಲಕ ಹನೀಫ್ ಬನ್ನೂರು ಅವರ ಮಗಳು ಶಜ್ವಾ ಫಾತಿಮಾ ಸಾವನ್ನಪ್ಪಿದ್ದಾಳೆ. ಹನೀಫ್, ಪತ್ನಿ, ಇಬ್ಬರು ಮಕ್ಕಳು ಮತ್ತು ಅತ್ತೆಗೆ ಗಾಯವಾಗಿದ್ದು, ಈ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಘಟನೆ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *