Mon. Nov 3rd, 2025

Ujire: ಕಲಾ ಸಿಂಚನ 2025 – ಅನುಗ್ರಹ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

ಉಜಿರೆ: ಸೇಕ್ರೆಡ್ ಹಾರ್ಟ್ ಅನುದಾನಿತ ಪದವಿ ಪೂರ್ವ ಮಹಾವಿದ್ಯಾಲಯ ಮಡಂತ್ಯಾರ್ ಇದರ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ದಿ 2/11/25 ಕಲಾ ಸಿಂಚನ 2025 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ಸಮೂಹ ನೃತ್ಯವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: 🟣💐ಬೆಳ್ತಂಗಡಿ: “ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

ಈ ಸ್ಪರ್ಧೆಯಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಾದ ನಿಶಾನ್ಯ,ಅನುಶ್ರೀ, ಅದಿತಿ, ಅಭಿಜ್ಞಾ,ಸಾನ್ವಿ, ವರ್ಷಿತ, ಕೀರ್ತನ, ಏಂಜಲಿನ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿನಿಯರನ್ನು ಶಾಲಾ ಸಂಚಾಲಕರಾದ ವಂ!ಫಾ ಅಬೆಲ್ ಲೋಬೊ, ಶಾಲಾ ಪ್ರಾಂಶುಪಾಲರಾದ ವಂ! ಫಾ ವಿಜಯ್ ಲೋಬೊ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *